ಭದ್ರಾವತಿ ತಾಲ್ಲೂಕು ಕೂಡ್ಲಿಗೆರೆ ಗ್ರಾಮದಲ್ಲಿ ಸುಬ್ರಹ್ಮಣ್ಯ ಸ್ವಾಮಿ ಮಾಲಾಧಾರಿಗಳ ಕೊನೆಯ ಪೂಜೆ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು. ಸುತ್ತಮುತ್ತಲಿನ ಗ್ರಾಮಸ್ಥರು, ಭಕ್ತರು ಮಾಲೆ ಧರಿಸಿರುವ ಭಕ್ತರು ಸ್ವಾಮಿಯ ಪೂಜೆ ಹಾಗೂ ಜಾತ್ರಾ ಮಹೋತ್ಸವದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ದೇವಸ್ಥಾನದ ಮುಂಭಾಗದ ಮುಖ್ಯ ರಸ್ತೆಯಲ್ಲಿ ಪಟಾಕಿ ಸಿಡಿಸಿ ಭಕ್ತರು ಸಂಭ್ರಮಿಸಿದರು.