ಉರ್ವ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿಯಾಝ್ ಯಾನೆ ನಿಯಾ ಎಂಬಾತನನ್ನು ಹುಳಿಮಾವು ಅರಕೆರೆ ಎಂಬಲ್ಲಿ ಬಂಧಿಸಲಾಗಿದೆ. ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 13 ಪ್ರಕರಣಗಳು ದಾಖಲಾಗಿದ್ದು, ಇತರ ನ್ಯಾಯಾಲಯಗಳಲ್ಲಿ ಈತನ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು.