ಚಿತ್ರದುರ್ಗದ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರ ಇಡಿ ಅಧಿಕಾರಿಗಳು ಸಿಕ್ಕಿಂ ನಲ್ಲಿ ಬಂದಿಸಿ ವಷಕ್ಕೆ ಪಡೆದಿದ್ದಾರೆ. ಇನ್ನೂ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಈ ಬಗ್ಗೆ ಮಾಹಿತಿ ಹೊರ ಬಿದ್ದಿದ್ದು ಸಿಕ್ಕಿಂ ನಲ್ಲಿ ವಷಕ್ಕೆ ಪಡೆದ ಇಡಿ ಅಧಿಕಾರಿಗಳು ಬೆಂಗಳೂರಿಗೆ ಅವರನ್ನ ಕರೆದುಕೊಂಡು ಬರುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಶಾಸಕ ಕೆ.ಸಿ. ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ನಗರದ ನಾಲ್ಕು ನಿವಾಸಗಳ ಮತ್ತು ಬೆಂಗಳೂರು ನಿವಾಸದ ಮೇಲೆಯೂ ಸಹ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳ ಪರಿಶೀಲನೆ ಮಡುತ್ತಿದ್ದಾರೆ.