ವಿಜಯಪುರ ಜಿಲ್ಲೆಯಲ್ಲಿ ಬಿ ಎಲ್ ಡಿ ಇ ಸಂಸ್ಥೆ ವತಿಯಿಂದ ನೂತನ ಕೃಷಿ ವಿಶ್ವವಿದ್ಯಾಲಯ ಕಾಲೇಜು ನಿರ್ಮಾಣ ಮಾಡಲು ಮುಂದಾಗಿದ್ದೇವೆ ಎಂದು ವಿಜಯಪುರದಲ್ಲಿ ಗುರುವಾರ ಸಾಯಂಕಾಲ 4ಗಂಟೆ ಸುಮಾರಿಗೆ ಬಿ ಎಲ್ ಡಿ ಇ ಚಾನ್ಸಲರ್ ಬಸನಗೌಡ ಪಾಟೀಲ್ ಹೇಳಿದರು. ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಖುಷಿ ಕಾಲೇಜು ನಿರ್ಮಾಣ ಮಾಡುವುದರಿಂದ ಇಲ್ಲಿನ ಸಾಕಷ್ಟು ವಿದ್ಯಾರ್ಥಿಗಳಿಗೆ ಇದರ ಅನುಕೂಲವಾಗಲಿದೆ. ಕೃಷಿಗೆ ವಿಜಯಪುರ ಜಿಲ್ಲೆಯ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ ಹೀಗಾಗಿ ಈ ಭಾಗದಲ್ಲಿ ಕೃಷಿ ಕಾಲೇಜ ನಿರ್ಮಾಣ ಮಾಡಲು ಹೊರಟಿದ್ದೇವೆ ಎಂದರು.