ಸಮಾಜವನ್ನು ತಿದ್ದಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ. ಶಿಕ್ಷಕರಿಗೆ ಕೇವಲ ಪಾಠ ಬೋಧನೆ ಮಾತ್ರವಲ್ಲ, ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳೂ ಅವಶ್ಯಕ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವಿ.ಶ್ರೀರಾಮಪ್ಪ ಹೇಳಿದರು.ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರಿಗಾಗಿ ಆಯೋಜಿಸಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ ಕೂಟದಲ್ಲಿ ಅವರು ಮಾತನಾಡಿದರು. "ಪ್ರತಿಯೊಬ್ಬರ ಸಾಧನೆಯ ಹಿಂದೆ ಒಬ್ಬ ಶಿಕ್ಷಕನ ಶ್ರಮ ಇರುತ್ತದೆ. ಸಮಾಜದಲ್ಲಿ ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದದ್ದು. ಬೆಳಗ್ಗಿನಿಂದ ಸಂಜೆಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ತೊಡಗಿರುವ ಶಿಕ್ಷಕರಿಗೂ ಮಾನಸಿಕ ನೆಮ್ಮದಿ ಅಗತ್ಯ. ಅದಕ್ಕಾಗಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಚಟುವಟಿ