ಕೊಳ್ಳೇಗಾಲ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿ ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಯಾದ ಹಿನ್ನೆಲೆ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ಶಾಸಕರು ಹಾಗೂ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು. ಬಳಿಕ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ ಎಲ್ಲಾ ಧರ್ಮದ ಜಾತಿಗಳು ಮೀಸಲಾತಿ ದೊರಕುತಿದೆ. ನ್ಯಾಯಾಧೀಶರಾದ ನಾಗಮೋಹನ್ ದಾಸ್ ವರದಿ ಬಂದ ಹಿನ್ನೆಲೆ ಮುಖ್ಯಮಂತ್ರಿಗಳು ಬಲಗೈ ಸಮುದಾಯಕ್ಕೆ 6 %, ಎಡಗೈ ಸಮುದಾಯಕ್ಕೆ 6% ಹಾಗೂ ಇತರೆ ವರ್ಗಕ್ಕೆ 5 % ಮೀಸಲಾತಿ ನೀಡಲಾಗಿದೆ ಎಂದರು