ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆ.29 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ-2025 ಹಮ್ಮಿಕೊಳ್ಳಲಾಗಿದೆ. ವಸತಿ, ವಕ್ಘ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ಈ.ತುಕಾರಾಮ್, ಡಾ.ಸೈಯದ್ ನಾಸೀರ್ ಹುಸೇನ್, ವಿಧಾನ ಪರಿಷತ್ ಶಾಸಕ ಚಂದ್ರಶೇಖರ ಬಿ.ಪಾಟೀಲ, ಶಾಸಕ ನಾರಾ ಭರತ್ ರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಬಾಬು ಜ