ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ನಾಗಲದಿನ್ನಿ ಗ್ರಾಮದ ಬಳಿಯ ತುಂಗಭದ್ರಾ ಕಾಲುವೆಗೆ ನಿರ್ಮಿಸಲಾಗುತ್ತಿರುವ ಮೇಲು ಸೇತುವೆ ಕಾಮಗಾರಿ ಎರಡು ವರ್ಷವಾದರೂ ಪೂರ್ಣಗೊಳ್ಳದೆ ಇರುವುದರಿಂದ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ ಎಂದು ಗ್ರಾಮದ ಜನರು ಬೇಸರ ವ್ಯಕ್ತಪಡಿಸಿದ್ದಾರೆ. ಗುರುವಾರ ಮಧ್ಯಾಹ್ನ ಹಳೆಯ ಸೇತುವೆ ಮೇಲೆ ವಾಹನಗಳು ಓಡಾಟ ನಡೆಸುವುದು ಕಂಡು ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದು, ಹಳೆಯ ಸೇತುವೆ ಸಂಪೂರ್ಣ ಶಿಥಿಲ ಗೊಂಡಿದೆ,6 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣ ಆರಂಭಿಸಿ ಎರಡು ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ, ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದು ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.