ಗುರುವಾರ ಸಂಜೆ 4ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆ ಹಾಗು ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ನಡೆಸಿದರು. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪತ್ತೆ ಕುರಿತಂತೆ ಜಿಲ್ಲೆಯಾದ್ಯಂತ ವ್ಯಾಪಕ ತಪಾಸಣೆಗಳನ್ನು ಕೈಗೊಳ್ಳುವ ಮೂಲಕ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬರದಂತೆ ಎಚ್ಚರ ವಹಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ. ಎಂ, ಡಿವೈಎಸ್ಪಿ ಗಿರೀಶ್ ಇದ್ದರು.