ಸೊರಬ ತಾಲೂಕಿನ ಕುಬಟೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ದುರ್ಗಾಂಬಾ ದೇವಿಯ ದೇವಸ್ಥಾನದ ಭೂಮಿ ಪೂಜೆಯನ್ನು ಉಸ್ತುವಾರಿ ಸಚಿವ ಮಧುಬಂಗಾರಪ್ಪ ಭಾನುವಾರ ಮಧ್ಯಾಹ್ನ 2 ಗಂಟೆಗೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಸಚಿವರು ಸೊರಬ ಕ್ಷೇತ್ರದ ಅಭಿವೃದ್ಧಿ ಗೆ ಸಾಕಷ್ಟು ಶ್ರಮಿಸುತ್ತಿದ್ದು, ದೇವಾಲಯ ಹಾಗೂ ಕ್ಷೇತ್ರದ ಒಳಿತಿಗಾಗಿ ಎಲ್ಲಾ ಪ್ರಯತ್ನ ಮಾಡಲಾಗುವುದು, ದೇವಾಲಯ ಕ್ಕೆ ಸರ್ಕಾರದಿಂದ ನೆರವು ನೀಡಲಾಗುವುದು ಎಂದರು.