ರಾಯಚೂರು ಜಿಲ್ಲೆಯ ಲಿಂಗಸೂಗೂರ ತಾಲೂಕಿನ ಹಾಲಬಾವಿ ಗ್ರಾಮದಲ್ಲಿ ಡೆಂಗ್ಯೂ ಜ್ವರ ಇರುವ ಆತಂಕ ಎದುರಾಗಿದೆ. ಗ್ರಾಮದಲ್ಲಿನ ಅನೇಕ ಜನರು ಡೆಂಗ್ಯೂ ಇರುವ ಸಂಖ್ಯೆಯಿಂದ ಪರೀಕ್ಷೆಗೆ ಒಳಗಾಗಿದ್ದಾರೆ. ಈಗಾಗಲೇ ಗ್ರಾಮದ ಇಬ್ಬರಲ್ಲಿ ಡೆಂಗ್ಯೂ ಇರುವ ಕುರಿತು ದೃಢಪಟ್ಟಿದ್ದು, ಗ್ರಾಮದಲ್ಲಿ ಅನೇಕ ಜನರಿಗೆ ನೆಗಡಿ ಕೆಮ್ಮು ಜ್ವರ ಕಾಣಿಸಿಕೊಂಡಿದ್ದು ಆರೋಗ್ಯ ಇಲಾಖೆಯಿಂದ ಗ್ರಾಮದಲ್ಲಿ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಲಿಂಗಸುಗೂರ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸುರೇಂದ್ರಬಾಬು ಅವರು ಗುರುವಾರ ಭೇಟಿ ನೀಡಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಧೈರ್ಯ ಮೂಡಿಸಿದ್ದಾರೆ.