ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ ನದಿ ಪಾತ್ರದಲ್ಲಿ ಪ್ರವಾಹದ ಬೀತಿ ಎದುರಾಗಿದ್ದು, ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯ ಶ್ರೀಕೃಷ್ಣ ದೇವರಾಯ ಸಮಾದಿ ಸಂಪೂರ್ಣ ಮುಳುಗಡೆಯಾಗಿದೆ. ನವವೃಂದಾವನ ಗಡ್ಡೆಯ ಸಂಪರ್ಕ ಕಡಿತಗೊಂಡಿದ್ದು, ಬೋಟ್ ಗಳನ್ನ ಸ್ಥಗಿತಗೊಳಿಸಲಾಗಿದೆ. ನದಿಗೆ 85 ಸಾವಿರ ಕ್ಯೂಸೆಕ್ ನೀರನ್ನ ಬಿಡುಗಡೆ ಮಾಡಲಾಗಿದೆ. ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ..