ಇದು ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆದ ಅಪಪ್ರಚಾರವಲ್ಲ, ಇಡೀ ಹಿಂದೂಗಳ ದೇವಸ್ಥಾನಗಳ ಮೇಲೆ ನಡೆದ ಅಪಚಾರವಾಗಿದೆ ಎಂದು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಹರಿನಾರಾಯಣ ಅಸ್ರಣ್ಣ ನುಡಿದರು. ಅವರು ಮಂಗಳೂರಿನ ಪುರಭವನದಲ್ಲಿ ನಡೆಯುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳವನ್ನು ಗುರಿಯಾಗಿಸಿ ನಡೆಯುತ್ತಿರುವ ಅಪಪ್ರಚಾರಗಳನ್ನು ಖಂಡಿಸಿ, ದಕ ಜಿಲ್ಲಾ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯ ವತಿಯಿಂದ ನಡೆದ ʼಧರ್ಮ ತೇಜೋ ಬಲಂ ಬಲಂʼ ಧರ್ಮಜಾಗೃತಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.