ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ವಿವಿಧ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸೆಪ್ಟೆಂಬರ್ 08ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿಯ ಜಲ ನಿರ್ಮಲ ಸಭಾಂಗಣದಲ್ಲಿ ನಡೆಯಿತು. ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳು ಸಮರ್ಪಕ ಅನುಷ್ಠಾನದ ಬಗ್ಗೆ ಪ್ರಾಧಿಕಾರದ ಅಧ್ಯಕ್ಷರು ಮತ್ತು ಎಲ್ಲ ಸದಸ್ಯರು ಸಮಗ್ರ ಪರಿಶೀಲಿಸಿದರು. ಸಾರಿಗೆ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದ ಸದಸ್ಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಬೇಡಿಕೆಗನುಸಾರ ಮಾರ್ಗಗಳ ಹೊಂದಾಣಿಕೆ ಮಾಡುವಂತೆ