ನಿರಂತರ ಮಳೆಯಿಂದ ಬೆಳೆಹಾನಿಯಾಗಿ ತೊಂದರೆಯಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ರೈತರು ಸಮೃದ್ಧವಾಗಿ ಬೆಳೆದ ಬೆಳೆ ಮಳೆಯಿಂದ ಹಾನಿಯಾಗಿದ್ದು, ಸಂಕಷ್ಟಕ್ಕೆ ಸಿಲುಕಿಸಿದೆ. ಸರಕಾರ ಕೂಡಲೇ ಸೂಕ್ತ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ ಮಸೂತಿ ಇದ್ದರು.