ನವಲಗುಂದ ನಗರದ ಶಿಕ್ಷಕರ ಭವನದಲ್ಲಿ ನಡೆದ ಕನಾ೯ಟಕ ರಾಜ್ಯ ಸರಕಾರಿ ನೌಕರರ ಸಂಘ ನವಲಗುಂದ ಶಾಖೆಯ 2024-25ನೇ ಸಾಲಿನ ವಾಷಿ೯ಕ ಸರ್ಬಸಾಧಾರಣಾ ಸಭೆ ಹಾಗೂ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಭಾಗಿಯಾಗಿದ್ದರು. ಗವಿಮಠದ ಪರಮಪೂಜ್ಯರಾದ ಶ್ರೀ ಮ.ನಿ.ಪ್ರ ಬಸವಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದರು. ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷರಾದ ವಿ. ಡಿ.ರಂಗಣ್ಣವರ, ಧಾರವಾಡ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಎಸ್. ಎಫ್. ಸಿದ್ಧನಗೌಡ್ರ, ತಾಲೂಕ ವೈದ್ಯಾಧಿಕಾರಿ ಡಾ.ಕರ್ಲವಾಡ, ಪುರಸಭೆ ಮುಖ್ಯಾಧಿಕಾರಿ ಸೇರಿದಂತೆ ಉಪಸ್ಥಿತರಿದ್ದರು.