ತುಮಕೂರಿನಲ್ಲಿ ನಡೆದ ಜಿಲ್ಲಾಮಟ್ಟದ 60 ಕೆಜಿ ಒಳಗಿನ ಕುಸ್ತಿ ಪಂದ್ಯಾವಳಿಯಲ್ಲಿ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಶಶಾಂಕ್ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಪಾರುಪತ್ತೆದಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜಶೇಖರ್ ಹಾಗೂ ಲಕ್ಷ್ಮಿ ಪುತ್ರ ಶಶಾಂಕ್ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ತುಮಕೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತುಮಕೂರು ಸಿದ್ದಗಂಗಾ ಮಠದಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ವಿಭಾಗಗಳ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಶಶಾಂಕ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.