ಬೆಂಗಳೂರಿಂದ ಬಂದಿದ್ದ 10 ಮಂದಿ ಯುವಕರ ತಂಡವು ಇಂದು ಮಧ್ಯಾಹ್ನ 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದ್ದಿದ್ದಾರೆ.ಸಮುದ್ರದ ಅಬ್ಬರದ ಅಲೆಗೆ ನಾಲ್ವರು ಕೊಚ್ಚಿ ಹೋಗಿದ್ದು ಓರ್ವನನ್ನು ತಕ್ಷಣ ಸ್ಥಳೀಯರು ಹಾಗೂ ಜೊತೆಗೆ ಇದ್ದ ಯುವಕರು ಸೇರಿ ಎತ್ತಿ ಮೇಲಕ್ಕೆ ತಂದಿದ್ದಾರೆ. ಆದರೆ ಆತ ಗಂಭೀರಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು.