ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರಗೆ 6 ದಿನಗಳ ಕಾಲ ಇ.ಡಿ ಕಸ್ಟಡಿ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಅಕ್ರಮವಾಗಿ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ಕೆ.ಸಿ ವೀರೇಂದ್ರಗೆ ಸಂಬಂಧಿಸಿದ 30ಕ್ಕೂ ಅಧಿಕ ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ನಡೆಸಿದ್ದರು. ಬಳಿಕ ಸಿಕ್ಕಿಂನ ಗ್ಯಾಂಗ್ ಟೋಕ್‌ನಲ್ಲಿದ್ದ ಅವರನ್ನ ಬಂಧಿಸಿದ್ದರು.ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಆಗಸ್ಟ್ 28ರಂದು ಮಧ್ಯಾಹ್ನ 4 ಗಂಟೆಯ ಬಳಿಕ ವೀರೇಂದ್ರ ಅವರನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು