ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣವನ್ನು ರಾಜ್ಯ ಸರ್ಕಾರ ಮರುಪರಿಶೀಲನೆ ಮಾಡಬೇಕು ಎಂದು ಬಿಜೆಪಿ ಮುಖಂಡ ರವೀಂದ್ರ ಜಾಲ್ದಾರ್ ಆಗ್ರಹಿಸಿದ್ದಾರೆ. ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಬುಧವಾರ ಮಧ್ಯಾಹ್ನ ಮಾತನಾಡಿ, ಒಳ ಮೀಸಲಾತಿ ವರ್ಗೀಕರಣ ಸೂತ್ರವನ್ನು ದೋಷ ಮುಕ್ತಗೊಳಿಸಲು ಮರು ಪರಿಶೀಲನೆ ಅಗತ್ಯವಾಗಿದೆ ಎಂದರು. ಇದರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ಣಯ ಸುಪ್ರೀಂ ಆದೇಶ ಪಾಲಿಸಿಲ್ಲ ಎಂದು ಆರೋಪಿಸಿ, ಸಪ್ಟೆಂಬರ್ 4 ರಂದು ನಡೆಯುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು.