ಜಿಲ್ಲೆಯ ಯಾವುದೇ ಮನೆಯು ವಿದ್ಯುತ್ ಸಂಪರ್ಕದಿದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ನ ಆಡಳಿತಾಧಿಕಾರಿ ಸುಷಮಾ ಗೋಡಬೋಲೆ ಸೂಚನೆ ನೀಡಿದರು. ಅವರು ಮಂಗಳವಾರ ಮಧ್ಯಾಹ್ನ 2.30ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಮತ್ತು ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯುತ್ ಸಂಪರ್ಕ ನೀಡುವಲ್ಲಿ ಅರಣ್ಯ ಇಲಾಖೆ ಅಥವಾ ಇತರೇ ಯಾವುದೇ ಇಲಾಖೆಯಿಂದ ಸಮಸ್ಯೆಯಾದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಸಮಸ್ಯೆಯನ್ನು ಬಗೆಹರಿಸಿಕೊಂಡು ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ನೀಡಬೇಕು ಎಂದರು.