ಬಾಲಕನ ಮೇಲೆ 6 ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ ಘಟನೆಯೊಂದು ಬುಧವಾರ ತಾಲ್ಲೂಕಿನ ನಾಯಕನಹಟ್ಟಿಯ ತೋಟವೊಂದರಲ್ಲಿ ನಡೆದಿದೆ. ಪಟ್ಟಣದ ಇರ್ಷಾದ್ ಎಂಬುವವರ ತೋಟದಲ್ಲಿ ಕೂಡ್ಲಿಗಿ ತಾಲ್ಲೂಕಿನ ಆರಕಬಾವಿ ಗ್ರಾಮದ ಅನಿಲ್ ಎಂಬ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿವೆ. ಬಾಲಕನಿಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಬಾಲಕನ ತಂದೆ-ತಾಯಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾರೆ.