ಕಲಬುರಗಿ : ಕಲಬುರಗಿ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕಾಳಗಿ ತಾಲೂಕಿನ ಭೂತ್ಪುರ ಗ್ರಾಮದ ಬಳಿಯ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿರುವ ಪರಿಣಾಮ ಸೇತುವೆ ಜಲಾವೃತಗೊಂಡಿವೆ.. ಜು22 ರಂದು ಬೆಳಗ್ಗೆ 8 ಗಂಟೆಗೆ ಮಾಹಿತಿ ಲಭ್ಯವಾಗಿದೆ. ಸೇತುವೆ ಜಲಾವೃತಗೊಂಡ ಪರಿಣಾಮ ಭೂತ್ಪುರ ಗ್ರಾಮದಿಂದ ಚಿಂಚೋಳಿ, ಸೇಡಂ, ಕಾಳಗಿ ಮಧ್ಯೆಗಿನ ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸವಾರರು ಪರದಾಟ ನಡೆಸ್ತಿದಾರೆ