ನಿರಂತರವಾಗಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿನ ರೈತರ ಬೆಳೆ ನಷ್ಟವಾಗಿ ತುಂಬಾ ತೊಂದರೆಗೆ ಸಿಲುಕಿದ್ದು ಸರಕಾರ ಕೂಡಲೇ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಶಹಪುರ ನಗರದ ತಹಸಿಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗಿದೆ.ಸೋಮವಾರ ಮಧ್ಯಾಹ್ನ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅನೇಕರು ಮಾತನಾಡಿ,ಬೆಳೆ ನಷ್ಟದಿಂದ ರೈತ ತುಂಬಾ ಹೈರಾಣಾಗಿದ್ದು ಮುಂದೆ ವ್ಯವಸಾಯ ಮಾಡಲು ಸಾಧ್ಯವಾಗದಂತಾಗಿದೆ.ರೈತರಿಗೆ ಪ್ರತಿ ಎಕರೆಗೆ 50ಸಾವಿರ ಪರಿಹಾರ ಹಾಗೂ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.ನಂತರ ತಹಸಿಲ್ದಾರ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.ಸಂಘದ ಜಿಲ್ಲಾ ಪ್ರ. ಕಾರ್ಯದರ್ಶಿ ಎಸ್.ಎಮ್.ಸಾಗರ,ತಾ.ಅಧ್ಯಕ್ಷ ಭೀಮಣ್ಣ ಟಪ್ಪೆದಾರ್,ಭೀಮರಾಯ ಪೂಜಾರಿ ಸೇರಿ ಅನೇಕರು ಭಾಗವಹಿಸಿದ್ದರು.