ಹಾಸನ: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ನೆನ್ನೆ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್ ಹರಿದು ನಡೆದ ಅವಘಡದ ಸ್ಥಳಕ್ಕೆ ಕಂದಾಯ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಅವಘಡಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಂದ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು, ಬಳಿಕ ಅವಘಡದಲ್ಲಿ ಬಂಟರಹಳ್ಳಿ ಗ್ರಾಮದಲ್ಲಿ ಮೃತಪಟ್ಟ ಪ್ರಭಾಕರ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸ್ಥಳದಲ್ಲೇ ಮೃತ ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಿಸಿದರು. ಅದಕ್ಕೂ ಮುನ್ನ ಶಾಂತಿಗ್ರಾದಲ್ಲಿ ಜಿಲ್ಲಾಡಳಿತ, ಪೋಲೀಸ್ ಇಲಾಖೆ ಅಧಿಕಾರಿಗಳ ಜೊತೆ ತುರ್ತು ಅಭೆ ನಡೆಸಿ ಘಟನೆ ಬಗ್ಗೆ ಮಾಹಿತಿ ಪಡೆದರು.