ಚಿತ್ರದುರ್ಗ:-ಬ್ರಹ್ಮಶ್ರೀ ನಾರಾಯಣ ಗುರುಗಳ ಸಿದ್ದಾಂತಗಳು ಸರ್ವಕಾಲಿಕ ಮೌಲ್ಯಗಳನ್ನು ಹೊಂದಿವೆ ಎಂದು ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಪೀಠಾಧಿಪತಿ ಸ್ವಾಮಿ ವಿಖ್ಯಾತಾನಂದ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸಮಾರಂಭ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಂತರ ಆರ್ಯ ಈಡಿಗರ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.