ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಧರಣಿ ನಡೆಸುತ್ತಿದ್ದು ಏಳನೇ ದಿನಕ್ಕೆ ಕಾಲಿಟ್ಟಿದೆ. ಅತಿವೃಷ್ಟಿ ಮಳೆಯಿಂದ ನಾಶವಾದ ಬೆಳೆಗಳಿಗೆ ಪರಿಹಾರ ಹಾಗೂ ಬೆಳೆ ವಿಮೆ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಧರಣಿ ನಡೆಸಲಾಗುತ್ತಿದೆ. ಆಳಂದ ಶಾಸಕ ಬಿ.ಆರ್. ಪಾಟೀಲ್ ಧರಣಿ ಸ್ಥಳಕ್ಕೆ ಭೇಟಿ ನೀಡಿ, ರೈತರ ಹೋರಾಟದ ಜೊತೆಗೆ ನಾವಿದ್ದೇವೆ ಎಂದು ಭರವಸೆ ನೀಡಿದರು.