ಅಪ್ರಾಕ್ತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆಯನ್ನು ಶಿವಮೊಗ್ಗದ ಪೋಕ್ಸೋನ್ಯಾಯಾಲದ ನ್ಯಾಯಾಧೀಶರು ಆದೇಶಿಸಿದ್ದಾರೆ. 2022 ರಲ್ಲಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬ 17 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ,ಈ ಸಂಬಂಧ ಮಾಳೂರು ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 75,00೦ ರೂ. ದಂಡ ವಿಧಿಸಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಶಿವಮೊಗ್ಗದಿಂದ ಸಂತ್ರಸ್ತ ಬಾಲಕಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಆದೇಶಿಸಿದೆ ಈ ಕುರಿತಾದ ಮಾಹಿತಿ ಪ್ರಕಟಣೆ ಮೂಲಕ ಭಾನುವಾರ ಲಭ್ಯವಾಗಿದೆ.