ಯಳಂದೂರು ತಾಲೂಕಿನ ಇರಸವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಇರಸವಾಡಿ ಹಾಗೂ ಸುತ್ತೂರು ಗ್ರಾಮದಲ್ಲಿ ಸಮಸ್ಯೆಗಳ ಸುರಿಮಳೆ ಇದ್ದು ಇತ್ತ ಯಾರು ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸುತ್ತೂರು ಹಾಗೂ ಇರಸವಾಡಿ ಗ್ರಾಮದಲ್ಲಿ ಕಳೆದ ಏಳೆಂಟು ತಿಂಗಳಿಂದ ಚರಡಿಯಲ್ಲಿ ಹೂಳು ತೆಗೆದಿಲ್ಲ, ಇದರಿಂದ ರೋಗ ರುಜಿನ ಹರಡುವ ಭೀತಿ ಎದುರಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಸಮಸ್ಯೆಗಳನ್ನು ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ ಕೇಳಿದರೆ ಪಿಡಿಒ ಉಡಾಫೆ ಉತ್ತರ ನೀಡುತ್ತಾರೆ ಎಂದರು