ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 31 ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 13, ಶನಿವಾರ ಮಧ್ಯಾಹ್ನ 12 ಗಂಟೆಗರ ರಾಷ್ಟ್ರೀಯ ಲೋಕ್ ಅದಾಲತ್ ಸುಸೂತ್ರವಾಗಿ ನಡೆದು, ವಿವಿಧ ವ್ಯಾಜ್ಯಗಳ ಪ್ರಕರಣಗಳು ವಿಲೇವಾರಿಯಾದವು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಖುದ್ದಾಗಿ ಪ್ರಕರಣಗಳ ವಿಲೇವಾರಿ ಮಾಡುವಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ನಡೆದ ಲೋಕ್-ಅದಾಲತ್‌ಗಳನ್ನು ವೀಕ್ಷಿಸಿದರು.