ಬೆಳ್ತೂರು ಸೇರಿದಂತೆ ಗೌರಿಬಿದನೂರು ತಾಲ್ಲೂಕಿನ ತೊಂಡೇಭಾವಿ ಹೋಬಳಿಯ 38 ಗ್ರಾಮಗಳ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿಧ್ಯಾರ್ಥಿಗಳಿಗೆ ಕಲಿಕೆಗೆ ಸಹಕಾರಿಯಾಗಲು ಶೈಕ್ಷಣಿಕವಾಗಿ ವಿಧ್ಯಾರ್ಥಿಗಳಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ನೋಟ್ ಬುಕ್,ಸ್ಪೆಟರ್ ಮತ್ತು ಬ್ಯಾಗ್ ಗಳನ್ನು ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡರವರು ನೀಡಿದರು. ಈ ವೇಳೆ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಅಂತಹ ಬಡ ಮಕ್ಕಳಿಗೆ ಅನುಕೂಲವಾಗಲೆಂದು ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲೆಂದು ಈ ಸಾಮಗ್ರಿಗಳನ್ನ ವಿತರಣೆ ಮಾಡುತ್ತಿದ್ದು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.