ಅರಣ್ಯ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದು ನ್ಯಾಯಾಧೀಶ ಟಿ ಎನ್ ಇನವಳ್ಳಿ ಅವರು ಹೇಳಿದರು. ಗುರುವಾರ ರಾಷ್ಟ್ರೀಯ ಅರಣ್ಯ ಹುತಾತ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು ಅರಣ್ಯ ರಕ್ಷಣೆ ಮಾಡುವುದರಲ್ಲಿ ಅರಣ್ಯ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದರು. ಆದರೂ, ಇನ್ನೂ ಕೆಲ ಕಡೆಗಳಲ್ಲಿ ಅರಣ್ಯ ರಕ್ಷಣೆ ಕಾಪಾಡುವಲ್ಲಿ ಕೆಲ ಪ್ರಕರಣಗಳು ಇತ್ಯರ್ಥವಾಗಬೇಕಿದೆ ಎಂದು ಅವರು ಹೇಳಿದರು. ಅರಣ್ಯ ಪ್ರದೇಶ ಹಾಳಾಗದಂತೆ ಹಾಗೂ ಕಾಡು ಪ್ರಾಣಿಗಳನ್ನು ಸಂರಕ್ಷಣೆ ಮಾಡುವುದರಲ್ಲಿ ಅರಣ್ಯ ಸಿಬ್ಬಂದಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ಅವರು ಹೇಳಿದರು