Download Now Banner

This browser does not support the video element.

ದಾಂಡೇಲಿ: ನಗರದಲ್ಲಿ ಇಂದು 15 ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗಣೇಶನ ವಿಸರ್ಜನೆ, ಪೊಲೀಸ್ ಬಿಗಿ ಭದ್ರತೆಗೆ ಕ್ರಮ

Dandeli, Uttara Kannada | Sep 6, 2025
ದಾಂಡೇಲಿ : ಈ ವರ್ಷದ ಚೌತಿಯ 11ನೇ ದಿನವಾದ ಇಂದು ಶನಿವಾರ ದಾಂಡೇಲಿ ನಗರದ 15 ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಗಣೇಶನ ವಿಸರ್ಜನೆ ಮೆರವಣಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಶಾಂತಿಯುತ ಮತ್ತು ಸರಕಾರದ ಮಾರ್ಗಸೂಚಿಯಂತೆ ವಿಸರ್ಜನಾ ಮೆರವಣಿಗೆ ನಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಗತ್ಯ ಕ್ರಮವನ್ನು ಕೈಗೊಂಡಿದೆ. ಇಂದು ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಡಿವೈಎಸ್ಪಿ ಶಿವಾನಂದ ಮದರಕಂಡಿ ಅವರ ಮಾರ್ಗದರ್ಶನದಲ್ಲಿ ಸಿಪಿಐ ಜೈಪಾಲ್ ಪಾಟೀಲ್ ಅವರ ನೇತೃತ್ವದಲ್ಲಿ ನಗರ ಠಾಣೆ ಮತ್ತು ಗ್ರಾಮೀಣ ಠಾಣೆಯ ಪಿಎಸ್ಐ ಗಳ ಸಹಕಾರದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಯ್ತು.
Read More News
T & CPrivacy PolicyContact Us