ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ಮೇಲೆ ಮತಾಂಧರು ಕಲ್ಲು ತೂರಾಟ ನಡೆಸಿದ್ದು ಖಂಡನೀಯವಾಗಿದ್ದು, ಕಾಂಗ್ರೆಸ್ ಸರ್ಕಾರ ಪ್ರತಿಯೊಂದು ಘಟನೆಯಲ್ಲೂ ಹಿಂದುಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಅವರು ಸೋಮವಾರ ಸಂಜೆ 7ಕ್ಕೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಓಲೈಕೆ ಪರಿಣಾಮವಾಗಿ ಮತಾಂಧರು ಹಿಂದುಗಳ ಹಬ್ಬದಲ್ಲಿ ಕಲ್ಲು ತೂರುವಷ್ಟು ಧೈರ್ಯ ತೋರುತ್ತಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.