ತಮ್ಮ ಕೆಲಸ ಕಾರ್ಯಗಳಿಗಾಗಿ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೆ ಬೆದರಿಕೆ ಹಾಕುವುದು, ಮಾಹಿತಿ ಕೇಳಿದವರಿಗೆ ಬೆದರಿಕೆ ಹಾಕುತ್ತಾರೆಂಬ ಆರೋಪ ಹೊತ್ತ ನಂಜನಗೂಡು ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕ ಕಿರಣ್ ಕುಮಾರ್ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ತಹಸೀಲ್ದಾರ್ ಕಚೇರಿಗೆ ಪತ್ರ ಬರೆಯಲಾಗಿದೆ ಡಿಸಿ ಯವರ ಪತ್ರ ಬರೆದು ತಿಂಗಳುಗಳೇ ಉರುಳಿದ್ದರೂ ತಹಸೀಲ್ದಾರ್ ಕ್ರಮ ಕೈಗೊಂಡಿಲ್ಲವೆಂಬ ಆರೋಪ ಕೇಳಿ ಬಂದಿದೆ. ಕಿರಣ್ ಕುಮಾರ್ ವಿರುದ್ದ ಕ್ರಮ ಕೈಗೊಳ್ಳುವಂತೆ ಸಿಂಧುವಳ್ಳಿ ಗ್ರಾಮದ ವೆಂಕಟೇಶ್ ಎಂಬುವರು ನೀಡಿದ್ದ ಮನವಿ ಆಧರಿಸಿ ಜಿಲ್ಲಾಧಿಕಾರಿಗಳು ತಹಸೀಲ್ದಾರ್ ಗೆ ಪತ್ರ ಬರೆದು ವರದಿ ಕೇಳಿದ್ದರು.