ಕಲಬುರಗಿ : ಆಗಷ್ಟ್ 14 ರಂದು ಲಿಂಗೈಕ್ಯರಾದ ಕಲಬುರಗಿಯ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಸಂಸ್ಥಾನದ ಎಂಟನೇ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾರಿಗೆ ಇಂದು ನುಡಿ ಪುಷ್ಪಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.. ಆಗಷ್ಟ್ 28 ರಂದು ಮಧ್ಯಾನ 1 ಗಂಟೆಗೆ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಅನುಭವ ಮಂಟಪದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಲಿಂಗೈಕ್ಯ ಶ್ರೀ ಶರಣಬಸಪ್ಪ ಅಪ್ಪಾರ ಭಾವಚಿತ್ರಕ್ಕೆ ಮಠಾಧೀಶರು ಮತ್ತು ಜನಪ್ರತಿನಿಧಿಗಳು ಪುಷ್ಪಾಂಜಲಿ ಸಲ್ಲಿಸಿದರು.