ತಾಲ್ಲೂಕಿನ ಮೈಲನಹಳ್ಳಿ ಗ್ರಾಮದಲ್ಲಿ ಗುರುವಾರ ಚಿತ್ರದುರ್ಗದ ದೃಷ್ಟಿ ಕಣ್ಣಿನ ಆಸ್ಪತ್ರೆ, ಮೈಲನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ಮೈಲನಹಳ್ಳಿ ಹಾಲಿನ ಡೈರಿ ಆವರಣದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ 100 ಕ್ಕೂ ಹೆಚ್ಚು ಜನರಿಗೆ ಉಚಿತ ನೇತ್ರ ತಪಾಸಣೆ ಮಾಡಲಾಯಿತು. 10 ಜನರು ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದರು. ಮೈಲನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.ಮೈಲನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಿಂಗಪ್ಪ ಇದ್ದರು.