ಚಾಮರಾಜನಗರದ ಉಪ ಸಂರಕ್ಷಣಾಧಿಕಾರಿ ಅವರ ಕಚೇರಿ ಆವರಣದಲ್ಲಿ ಅರಣ್ಯ ಇಲಾಖೆ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ, ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣ ದಿನವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಭಾವತಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಸಿಇಒ ಮೋನಾ ರೋತ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ಹಾಗೂ ಇತರೆ ಗಣ್ಯರು ಸ್ಮರಣಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ನ್ಯಾಯಾಧೀಶರಾದ ಪ್ರಭಾವತಿ ಮಾತನಾಡಿ ಹುತಾತ್ಮರ ಜೊತೆಗೆ ಅವರ ಕುಟುಂಬದವರನ್ನು ನೆನಪಿಸಿಕೊಂಡು ಸನ್ಮಾನ ಮಾಡಬೇಕು ಹಾಗೂ ಅರಣ್ಯ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು