ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವನಗಾವ ಗ್ರಾಮದ ಭೀಮಾನದಿಯ ಸೇತುವೆಯನ್ನು ಭಾನುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ವೀಕ್ಷಣೆ ಮಾಡಿದರು. ಭೀಮಾನದಿಯ ಸುತ್ತಮುತ್ತ ಜಮೀನುಗಳಿಗೆ ನೀರು ನುಗ್ಗಿದ ಹಿನ್ನೆಲೆ, ಮತ್ತು ಮನೆಗಳಿಗೆ ಪ್ರವಾಹದ ನೀರು ನುಗ್ಗಿದ ಪ್ರದೇಶಗಳನ್ನು ವೀಕ್ಷಣೆ ಮಾಡಿದರು. ಭೀಮಾ ನದಿಯ ಸೇತುವೆಯ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿ, ಕೊಡಲೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಅಶೋಕ ಮನುಗೊಳಿ ಸೇರಿದಂತೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.