ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ನಡಕಲಪುರ ಗೇಟ್ ನಲ್ಲಿರುವ ನಡುಮಾರ್ಗದ ಬಸವೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಹೋಬಳಿ ಮಟ್ಟದ ಸಮ್ಮೇಳನ ಕಾರ್ಯಕ್ರಮ ನಡೆಯಿತು. ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬಡವರು ಮತ್ತು ಗ್ರಾಮೀಣ ಪ್ರದೇಶದ ಜನರ ವಲಸೆ ಹೋಗುವುದನ್ನು ತಪ್ಪಿಸಲು ಆರಂಭವಾದ ಉದ್ಯೋಗ ಖಾತರಿ ಯೋಜನೆಗೆ ಕೇಂದ್ರ ಸರ್ಕಾರ ಪ್ರಸ್ತುತ ವರ್ಷ ಅನುದಾನ ಕಡಿತ ಮಾಡಿದ್ದು, ಬಡಜನರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಲಿಕಾರರ ಸಂಘದ ಪದಾಧಿಕಾರಿಗಳಾದ ಬಾಣಸಮುದ್ರ ಗ್ರಾಮ