ಧರ್ಮದ ರಕ್ಷಣೆಗಾಗಿ, ದುಷ್ಟರ ಸಂಹಾರಕ್ಕಾಗಿ, ಶಿಷ್ಟರ ರಕ್ಷಣೆಗಾಗಿ ಜನ್ಮ ತಾಳಿದವನೇ ವೀರಭದ್ರ ಎಂದು ಕಾಶಿಪೀಠದ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿದರು. ಶಿವಮೊಗ್ಗ ನಗರದ ಚೌಕಿಮಠ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಾಗೂ ವೀರಭದ್ರೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಂಗೀತಯುಕ್ತ ಇಷ್ಟಲಿಂಗ ಪೂಜೆಯನ್ನು ನೆರವೇರಿಸಿ ಮಂಗಳವಾರ ಸಂಜೆ 5 ಗಂಟೆಗೆ ಮಾತನಾಡಿದ ಅವರು ವಿಶಾಲವಾದ ಚರಿತ್ರೆ ವೀರಭದ್ರ ನಿಗಿದೆ ಎಂದರು