ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಶಾಸಕ ವಿಠ್ಠಲ್ ಕಟಕದೊಂಡ ಸೇರಿ ವಿಜಯಪುರ ನಗರವನ್ನು ಹಾಳು ಮಾಡಿದ್ದಾರೆ. ನಾಗಠಾಣ ಮತಕ್ಷೇತ್ರದ ಐದು ವಾರ್ಡಗಳು ಸಂಪೂರ್ಣವಾಗಿ ಅಭಿವೃದ್ಧಿಯಿಂದ ವಂಚಿತವಾಗಿದ್ದಾವೆ. ಇಬ್ಬರು ಶಾಸಕರು ಅಭಿವೃದ್ಧಿ ಮಾಡದೇ ಕೇವಲ ರಾಜಕೀಯ ಗೊಂದಲ ಹೇಳಿಕೆಗಳನ್ನು ನೀಡುತ್ತಾ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ವಿಜಯಪುರದಲ್ಲಿ ಶುಕ್ರವಾರ ಮಧ್ಯಾಹ್ನ 12ಗಂಟೆ ಸುಮಾರಿಗೆ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ರವೀಂದ್ರ ಲೋಣಿ ಹೇಳಿದರು. ನಾಗಠಾಣ ಮೀಸಲು ಮತಕ್ಷೇತ್ರದ ಸಂಪೂರ್ಣವಾಗಿ ಅಭಿವೃದ್ಧಿಯಿಂದ ಕುಂಠಿತವಾಗಿದೆ ಎಂದು ಮಾತನಾಡಿದರು.