ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವಾಗ ಘಟನೆ ಹೊಸನಗರ ತಾಲೂಕಿನ ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಬುಧವಾರ ನಡೆದಿದೆ.ಪವನ್ ಎಂಬುವರಿಗೆ ಸೇರಿದ ಮನೆಯಲ್ಲಿ ಅಗ್ನಿಯ ಭಗಡ ಸಂಭವಿಸಿದ್ದು,ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯಲ್ಲಿ ಹೊಗೆ ಕಾಣಿಸಿಕೊಂಡ ಬೆನ್ನಲ್ಲೇ ಸ್ಥಳೀಯರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎರಡು ಲಕ್ಷ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.