ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ತಾಲೂಕ ಪಂಚಾಯಿತಿ ಕಚೇರಿ ಆವರಣದಲ್ಲಿ ಬುಧವಾರ ಮಧ್ಯಾಹ್ನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಚಿಕ್ಕ ಕೊಟ್ನೆಕಲ್ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ನಡೆದ ಅವ್ಯವಾರ ತನಿಖೆ ನಡೆಸಬೇಕು ಹಾಗೂ ಪಿಡಿಓ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಜಾಗೀರ್ ಪನ್ನೂರ ಗ್ರಾಮದಲ್ಲಿ ಪರಿಶಿಷ್ಟ ಜನಾಂಗದವರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿ ಹಲವು ಬೇಡಿಕೆಗಳಿಗೆ ಒತ್ತಾಯಿಸಿದರು.