ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಶ್ರೀ ಶಾಂತೆಶ್ವರ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಭಾನುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಪ್ರಗತಿಗೆ ಕೆಲಸ ಮಾಡಬೇಕು ರೈತ ಪ್ರಗತಿ ಹೊಂದಿದ್ದಾರೆ ಸಹಕಾರಿ ಸಂಘಗಳು ಪ್ರಗತಿ ಹೊಂದುತ್ತವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಠಾಧೀಶರು ಕೃಷಿ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಸಾರ್ವಜನಿಕರು ಜನಪ್ರತಿನಿಧಿಗಳು ಭಾಗಿಯಾಗಿದ್ದರು.