ರಾಜ್ಯ ಸರ್ಕಾರ ರಚನೆ ಮಾಡಿದ ಎಸ್.ಐ.ಟಿ ತನಿಖೆಯನ್ನು ಧರ್ಮಸ್ಥಳ ಪ್ರಕರಣದ ಸತ್ಯ ಅರಿಯಲು ಎನ್.ಐ.ಎ ತನಿಖೆಗೆ ಕೊಡಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಧ್ಯಮಗಳು ಪ್ರಚಾರ ಮಾಡಿದ್ದು ನೋಡಿದರೆ ತನಿಖೆ ವಿಚಾರ ಬಿಟ್ಟು ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಸರ್ಕಾರ ಕಡಿವಾಣ ಹಾಕದಿರುವುದು ನೋಡಿದರೆ ಎಸ್ ಐಟಿ ತನಿಖೆಯಿಂದ ಸತ್ಯ ಹೊರ ಬರುವ ನಂಬಿಕೆ ಇಲ್ಲ. ರಾಜ್ಯ ಸರ್ಕಾರ ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬ ಸಂಶಯ ವ್ಯಕ್ತವಾಗುತ್ತದೆ ಎಂದು ತಿಳಿಸಿದ್ದಾರೆ.