ಉದ್ಯೋಗ ಸೃಷ್ಟಿಸಿ ,ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಿ ಘೋಷಣೆಯೊಂದಿಗೆ ಡಿ.ವೈ.ಎಫ್ಐ ನೇತೃತ್ವದ ಯುವಜನ ಜಾಥಾಕ್ಕೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ.ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ರಂಗಕರ್ಮಿ ಸಂತೋಷ್ ಶೆಟ್ಟಿ ಹಿರಿಯಡ್ಕ, ಅವರು ನೆರವೇರಿಸಿ ಮಾತನಾಡುತ್ತಾ ನಮ್ಮ ಜಿಲ್ಲೆಗೆ ಬಂದಿರುವ ಕೈಗಾರಿಕೆಗಳಿಂದಾಗಿ ನಮ್ಮ ನೆಲ,ಜಲ, ವಾಯು ಹಾಳಾಗುತ್ತಿದೆ ಆದರೆ ನಮ್ಮ ಯುವಕರಿಗೆ ಉದ್ಯೋಗಾ ವಕಾಶಗಳು ಮರೀಚಿಕೆಯಾಗಿ ಉಳಿದಿದೆ ಎಂಬುದು ದುರಂತ ಅವಕಾಶಗಳ ಕೊರತೆಯಿಂದಾಗಿ ಯುವ ಸಮುದಾಯ ಅಭದ್ರತೆಯಲ್ಲಿ ಬದುಕುವಂತಾಗಿದೆ ಎಂದರು.