ವಿಜಯಪುರ ಜಿಲ್ಲೆಯಲ್ಲಿ ಧಾರಾಕಾರ ಮಳೆ ಅವಾಂತರಕ್ಕೆ ಲಕ್ಷಾಂತರ ಎಕರೆ ಬೆಳೆಯು ಸಂಪೂರ್ಣವಾಗಿ ಹಾಳಾಗಿದೆ. ರೈತರು ಬೆಳೆದ ಮೆಕ್ಕೆಜೋಳ ತೊಗರಿ ಹತ್ತಿ ಬೆಳೆಗಳು ಮಳೆಗೆ ಆಹುತಿಯಾಗಿದ್ದಾವೆ ರಾಜ್ಯ ಸರ್ಕಾರ ಕಾಲ ಹರಣ ಮಾಡದೆ ಸಮೀಕ್ಷೆ ಮಾಡಿ ರೈತರಿಗೆ ಪರಿಹಾರ ನೀಡುವ ಕೆಲಸ ಮಾಡಬೇಕು. ಈಗಾಗಲೇ ಜನರು ಮನೆಮಠ ಕಳೆದುಕೊಂಡು ಕಾಳಜಿ ಕೇಂದ್ರದಲ್ಲಿ ವಾಸ ಮಾಡುತ್ತಿದ್ದಾರೆ. ಕೂಡಲೆ ಅವರಿಗೆ ಸೂಕ್ತ ವಸತಿ ಕಲ್ಪಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಸೋಮವಾರ ಸಾಯಂಕಾಲ 5ಗಂಟೆ ಸುಮಾರಿಗೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಎಸ್ ಪಾಟೀಲ್ ನಡಹಳ್ಳಿ ಹೇಳಿದರು.