ಸವಣೂರ ತಾಲೂಕು ತೆಗ್ಗಿಹಳ್ಳಿ ಗ್ರಾಮದಲ್ಲಿ ಸುಮಾರು 64 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸಿ.ಸಿ.ರಸ್ತೆ ಮತ್ತು ಸಿ.ಸಿ.ಕಾಲುವೆ ನಿರ್ಮಾಣ ಕಾಮಗಾರಿಗೆ ಶಾಸಕ ಯಾಸೀರ್ ಖಾನ್ ಪಠಾಣ್ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಪಂಚ ಗ್ಯಾರಂಟಿ ಬಗ್ಗೆ ಟೀಕೆ ಮಾಡುವ ವಿರೋಧ ಪಕ್ಷದ ಮುಖಂಡರಿಗೆ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿರುವುದು ಕಾಣಿಸೊಲ್ಲವೇ....ಎಂದು ಟೀಕಿಸಿದ ಅವರು, ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ಸಾಮಗ್ರಿ ಬಳಸಿ ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸಿ ಎಂದು ಸೂಚಿಸಿದರು.