ಕೆಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿರುವ ರಚನಾ ಸಂಸ್ಥೆ ಕ್ರೈಸ್ತ ಕೆಥೊಲಿಕ್ ಸಮಾಜದ ಯಶಸ್ವಿ ಉದ್ಯಮಿಗಳು, ವೃತ್ತಿಪರರು, ಕೃಷಿಕರು, ಅನಿವಾಸಿ ಭಾರತೀಯರು ಹಾಗೂ ಸಾಧಕ ಮಹಿಳೆಯರನ್ನು ಗುರುತಿಸಿ ನೀಡುವ 2025ನೇ ಸಾಲಿನ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಿದೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಚನಾ ಅಧ್ಯಕ್ಷ ಜೊನ್ ಬಿ. ಮೊಂತೇರೊ, ಸುಮಾರು 25 ಜ್ಯೂರಿ ಸದಸ್ಯರನ್ನೊಳಗೊಂಡ ಸಮಿತಿಯು ಪರಿಶೀಲನೆ ನಡೆಸಿ 2025ನೇ ಸಾಲಿನ ಪ್ರಶಸ್ತಿಗಾಗಿ ಐವರನ್ನು ಆಯ್ಕೆ ಮಾಡಿದೆ.